Thursday, July 9, 2020

Toto Award for Creative Writing in Kannada 2021: Call for Entries



ಟೊಟೊ ಪುರಸ್ಕಾರ ೨೦೨೧ : ಕನ್ನಡ ಸೃಜನಶೀಲ ಸಾಹಿತ್ಯ ಪ್ರಶಸ್ತಿಗಾಗಿ ಕೃತಿಗಳನ್ನು ಕಳಿಸುವ ಕೊನೆಯ ದಿನಾಂಕವನ್ನು ೧೦ ಸೆಪ್ಟೆಂಬರ್ ವರೆಗೂ ವಿಸ್ತರಿಸಲಾಗಿದೆ. 


ಟೊಟೊ ಪುರಸ್ಕಾರ 2021

ಕನ್ನಡ ಸೃಜನಶೀಲ ಸಾಹಿತ್ಯ
ಪ್ರವೇಶಗಳನ್ನು ಸಲ್ಲಿಸಲು ಆಹ್ವಾನ


ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊ ಪುರಸ್ಕಾರವು ಹದಿನೈದು ವರ್ಷಗಳಿಂದ ಯುವ ಪ್ರತಿಭೆಗಳಿಗೆ ಪ್ರೊತ್ಸಾಹ ನೀಡುತ್ತಾ ಬಂದಿದೆ.  ಕಳೆದ ಹತ್ತು ವರ್ಷಗಳಿಂದ ಕನ್ನಡಕ್ಕೂ ವಿಸ್ತೃತಗೊಂಡಿದ್ದು, ಹನ್ನೊಂದನೆಯ ವರ್ಷಕ್ಕೆ ಕಾಲಿಡುತ್ತಿದೆ. ಈ ಪ್ರಶಸ್ತಿಯನ್ನು ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts - TFA) ಸಂಸ್ಥೆಯು ಸ್ಥಾಪಿಸಿ ನಿರ್ವಹಿಸುತ್ತಿದೆ.

ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2021 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸುತ್ತಿದೆ. 

ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು ಭಾರತೀಯ ನಾಗರಿಕರಾಗಿರಬೇಕು (ಓವರ್ಸೀಸ್ ಸಿಟಿಜೆನ್ ಆಫ್ ಇಂಡಿಯಾ ಚೀಟಿ ಉಳ್ಳವರು ಪ್ರವೇಶಕ್ಕೆ ಅರ್ಹರಾಗಿರುವುದಿಲ್ಲ). ಹಾಗೂ 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಅಂದರೆ,   ನೀವು ಜನವರಿ 1, 1991  ರ ನಂತರ ಹುಟ್ಟಿದವರಾಗಿದ್ದಲ್ಲಿ ಮಾತ್ರ ಈ ಪುರಸ್ಕಾರಕ್ಕೆ ಪ್ರವೇಶಗಳನ್ನು  ಕಳಿಸಲು ಅರ್ಹರು. 

ಪ್ರವೇಶಗಳನ್ನು  ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಕಳಿಸಬಹುದು.
/ಮೂರು/ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗುತ್ತದೆ. ಈ ಆಯ್ಕೆಯನ್ನು ಕನ್ನಡದ ಹಿರಿಯ ಬರಹಗಾರರ ಸಮಿತಿಯು ಪ್ರತಿ ವರ್ಷದಂತೆ ಮಾಡಲಿದೆ. ಟೊಟೊ ಪುರಸ್ಕಾರವು 50,000 ರೂಪಾಯಿಗಳ ನಗದು ಬಹುಮಾನವನ್ನು ಒಳಗೊಂಡಿದೆ. 

ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನಾಂಕ:  31 ಆಗಸ್ಟ್,  2020

ಪ್ರವೇಶಗಳನ್ನು MS Word ನಲ್ಲಿ ನುಡಿ, ಬರಹ ಅಥವಾ ಯೂನಿಕೋಡ್ ನಲ್ಲಿ ಮಾತ್ರ ಕಳಿಸಬೇಕು. ಮುದ್ರಿತ ಅಥವಾ ಹಸ್ತಪ್ರತಿಗಳನ್ನು ಸ್ವೀಕರಿಸುವುದಿಲ್ಲ. MS Word ಅಲ್ಲದೇ ಬೇರೆ ಯಾವ ಸಾಫ್ಟವೇರ್ ನಲ್ಲಿಯೂ ಪ್ರವೇಶಗಳನ್ನು ಸ್ವೀಕರಿಸುವುದಿಲ್ಲ. 

ಪ್ರವೇಶಗಳನ್ನು ಈ ಕೆಳಗಿನ ಈಮೇಲ್ ವಿಳಾಸಕ್ಕೆ ಕಳಿಸಿರಿ: totokannada@gmail.com
ಸಂದೇಹಗಳಿದ್ದಲ್ಲಿ ಇದೇ ವಿಳಾಸಕ್ಕೆ ಬರೆದು ಹೆಚ್ಚಿನ ವಿವರ ಕೇಳಬಹುದು.

ನೀವು ಸಲ್ಲಿಸುವ ಪ್ರತಿ ಪ್ರವೇಶದ ಜೊತೆಗೆ ಅರ್ಜಿಯನ್ನು ಲಗತ್ತಿಸಬೇಕು. ಈ ಅರ್ಜಿಯನ್ನು  http://totofundsthearts.blogspot.com  ಇಲ್ಲಿಂದ ನಕಲಿಳಿಸಬಹುದು (ಕಾಪಿ ಮಾಡಬಹುದು).  ಈ ಅರ್ಜಿ ಲ್ಲದ ಪ್ರವೇಶಗಳನ್ನು  ಪರಿಗಣಿಸುವುದಿಲ್ಲ. 

ನೆನಪಿರಲಿ: 
  • ನೀವು 1ನೇ ಜನವರಿ 1991 ರ ನಂತರ ಹುಟ್ಟಿದವರಾಗಿದ್ದಲ್ಲಿ ಮಾತ್ರ ಈ 
ಪುರಸ್ಕಾರಕ್ಕೆ ಪ್ರವೇಶಗಳನ್ನು ಕಳಿಸಲು ಅರ್ಹರಾಗಿರುತ್ತೀರಿ.

  • ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನಾಂಕ: 31 ಆಗಸ್ಟ್,/2020.  ಈ ದಿನಾಂಕದ ನಂತರ ಬಂದ ಪ್ರವೇಶಗಳನ್ನು ಪರಿಗಣಿಸುವುದಿಲ್ಲ.

  • ಪ್ರವೇಶಗಳನ್ನು MS Word ನಲ್ಲಿ ನುಡಿ, ಬರಹ ಅಥವಾ ಯೂನಿಕೋಡ್ ನಲ್ಲಿ ಮಾತ್ರ ಕಳಿಸಬೇಕು. ಮುದ್ರಿತ ಅಥವಾ ಹಸ್ತಪ್ರತಿಗಳನ್ನು ಸ್ವೀಕರಿಸುವುದಿಲ್ಲ.  MS Word ಅಲ್ಲದೇ ಬೇರೆ ಯಾವ ಸಾಫ್ಟವೇರ್ ನಲ್ಲಿಯೂ ಪ್ರವೇಶಗಳನ್ನು ಸ್ವೀಕರಿಸುವುದಿಲ್ಲ.

  • ಪ್ರವೇಶಗಳನ್ನು ಈ ಈಮೇಲ್ ವಿಳಾಸಕ್ಕೆ ಕಳಿಸಿರಿ: totokannada@gmail.com

  • ಭಾರತದಲ್ಲಿ ವಾಸಿಸುವ ಭಾರತೀಯ ನಾಗರಿಕರು ಮಾತ್ರ ಈ ಪುರಸ್ಕಾರಕ್ಕೆ ಪ್ರವೇಶಗನ್ನು ಕಳಿಸಬಹುದು.  

  • ಕವಿತೆಗಳನ್ನು ಕಳುಹಿಸುವವರು 8 ರಿಂದ 12 ಕವಿತೆಗಳನ್ನು ಕಳಿಸಬಹುದು. ಕತೆಗಳನ್ನು 
ಕಳಿಸುವವರು ಒಂದಕ್ಕಿಂತ ಹೆಚ್ಚು ಕತೆಗಳನ್ನು ಕಳಿಸಬಹುದು, ಆದರೆ ಎಲ್ಲ ಕತೆಗಳೂ 
ಸೇರಿ 7500 ಶಬ್ದಗಳನ್ನು ಮೀರಬಾರದು. ನಾಟಕಗಳ ಶಬ್ದಮಿತಿ 10,000 ಶಬ್ದಗಳು

  • ನೀವು ಎಲ್ಲ ಮೂರು ಪ್ರಕಾರಗಳಲ್ಲಿಯೂ ಪ್ರವೇಶಗಳನ್ನು ಕಳಿಸಬಹುದು. ಆದರೆ ಪ್ರತಿಯೊಂದು ಪ್ರಕಾರಕ್ಕೂ ಪ್ರತ್ಯೇಕವಾದ ಪ್ರವೇಶಗಳನ್ನು ಕಳಿಸಬೇಕು.  ಉದಾಹರಣೆಗೆ ನೀವು ಮೂರೂ ಪ್ರಕಾರಗಳಿಗೆ ಪ್ರವೇಶಗಳನ್ನು ಕಳಿಸಬಯಸಿದರೆ, ನಿಮ್ಮ ಕವಿತೆಗಳನ್ನು ಮೊದಲ 
ಪ್ರವೇಶವಾಗಿಯೂ, ಕತೆಗಳನ್ನು ಎರಡನೆಯ ಪ್ರವೇಶವಾಗಿಯೂ, ನಾಟಕವನ್ನು ಮೂರನೆಯ ಪ್ರವೇಶವಾಗಿಯೂ ಕಳಿಸಬೇಕು. ಪ್ರತಿಯೊಂದು ಪ್ರವೇಶದ ಮಿತಿ 7500 ಶಬ್ದಗಳು. ಒಂದಕ್ಕಿಂತ ಹೆಚ್ಚು ನಾಟಕಗಳಿದ್ದಲ್ಲಿ ಎಲ್ಲ ನಾಟಕಗಳ ಒಟ್ಟೂ ಶಬ್ದಗಳು 10,000 ಮೀರಬಾರದು. ಪ್ರತಿ ಪ್ರತ್ಯೇಕ ಪ್ರವೇಶಕ್ಕೂ ಪ್ರತ್ಯೇಕ ಅರ್ಜಿ ಕಳಿಸಬೇಕು.

  • ನೀವು ಸಲ್ಲಿಸುವ ಪ್ರತಿ ಪ್ರವೇಶದ ಜೊತೆಗೆ ಅರ್ಜಿಯನ್ನು ಲಗತ್ತಿಸಬೇಕು. ಈ ಅರ್ಜಿಯನ್ನು  http://totofundsthearts.blogspot.in/ ಇಲ್ಲಿಂದ ನಕಲಿಳಿಸಬಹುದು (ಕಾಪಿ ಮಾಡಬಹುದು).  ಈ ಅರ್ಜಿ ಲ್ಲದ ಪ್ರವೇಶಗಳನ್ನು  ಪರಿಗಣಿಸುವುದಿಲ್ಲ. 

  • ಈಗಾಗಲೇ ಪುಸ್ತಕರೂಪದಲ್ಲಿ ಪ್ರಕಟವಾಗಿರುವ ಕೃತಿಗಳನ್ನು ಪುರಸ್ಕಾರಕ್ಕಾಗಿ 
ಕಳಿಸುವಂತಿಲ್ಲ. ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಿಡಿ ಕತೆ, ಕವಿತೆ, ನಾಟಕಗಳನ್ನು 
ಕಳಿಸಬಹುದು. ಆದರೆ ಎಲ್ಲವೂ ಈಗಾಗಲೇ ಹೇಳಿದಂತೆ ಈಮೇಲ್ ಮೂಲಕ ಮಾತ್ರ ಕಳಿಸಬೇಕು. 

  • ಪ್ರವೇಶಕ್ಕಾಗಿ ಕಳಿಸುವ ಕತೆ, ಕವಿತೆ, ನಾಟಕಗಳ ಮೇಲೆ ಎಲ್ಲಿಯೂ ನಿಮ್ಮ ಹೆಸರು ಬರೆದಿರಬಾರದು. ಇದನ್ನು ಅರ್ಜಿಯಲ್ಲೇ ಬರೆದು, ಪ್ರವೇಶದ ಜೊತೆ ಕಳಿಸಬೇಕು.

  • ಅರ್ಜಿಯಲ್ಲಿ ನಿಮ್ಮ ಬ್ಯಾಂಕ್ ಖಾತೆಯಲ್ಲಿ ದಾಖಲಾದ ಹೆಸರನ್ನು ನಮೂದಿಸಿ. ಕಾವ್ಯನಾಮ ಇದ್ದಲ್ಲಿ, ನಿಮ್ಮ ಅಸಲಿ ಹೆಸರನ್ನು ಕೂಡ ಅರ್ಜಿಯಲ್ಲಿ ಸೂಚಿಸಬೇಕು.   

  • ನಿಮಗೆ ಅರ್ಜಿಯನ್ನು ಪಡೆಯುವಲ್ಲಿ ಅಥವಾ ಇತರ ತೊಂದರೆಗಳಿದ್ದಲ್ಲಿ totokannada@gmail.com  ಗೆ ಬರೆದು ಸಹಾಯ ಕೇಳಬಹುದು. 

  • ಈಮೇಲ್ Subject ನಲ್ಲಿ ನಿಮ್ಮ ಕೃತಿಯ ಪ್ರಕಾರವನ್ನು  ಸೂಚಿಸಬೇಕು. ಉದಾಹರಣೆಗೆ: ‘ಕನ್ನಡ ಸೃಜನಶೀಲ ಸಾಹಿತ್ಯ – ಕವಿತೆ’, ‘ಕನ್ನಡ ಸೃಜನಶೀಲ ಸಾಹಿತ್ಯ – ನಾಟಕ’ ಅಥವ  ‘ಕನ್ನಡ ಸೃಜನಶೀಲ ಸಾಹಿತ್ಯ – ಕತೆ’.

ಷರತ್ತುಗಳು:
ನೀವು ಸಲ್ಲಿಸಿದ ಬರಹಗಳನ್ನು ಹಿಂತಿರುಗಿಸಲಾಗುವುದಿಲ್ಲ. ಅಗತ್ಯವಾದಲ್ಲಿ ನೀವು ಸಲ್ಲಿಸಿದ ಬರಹಳ ಆಯ್ದ ಭಾಗಗಳನ್ನು ಅಂತರ್ಜಾಲ ತಾಣದಲ್ಲಿ ಅಥವ ಸಂಸ್ಥೆಯ 
ಬ್ಲಾಗ್’ನಲ್ಲಿ/ಪುರಸ್ಕಾರದ ಪ್ರಚಾಕ್ಕೆ ಬಳಸಿಕೊಳ್ಳುವ ಹಕ್ಕು ಟಿ.ಎಫ್.ಎ.ಗೆ ಇದೆ. ಉಳಿದಂತೆ ಕೃತಿಯ ಪೂರ್ತಿ ಹಕ್ಕುಸ್ವಾಮ್ಯವು ಬರಹಗಾರರದೇ ಆಗಿರುತ್ತದೆ. 

ಈ ಬಗ್ಗೆ ಯಾವುದೇ ಪತ್ರ ವ್ಯವಹಾರ ಮಾಡಲಾಗುವುದಿಲ್ಲ. ಪುರಸ್ಕಾರದ ಕುರಿತು ಟಿ.ಎಫ್.ಎ ಆಯ್ಕೆ ಸಮಿತಿಯ ನಿರ್ಧಾರವೇ ಅಂತಿಮವಾದುದು ಮತ್ತು ಇದನ್ನು ಯಾವ ಬಗೆಯಲ್ಲೂ ಪ್ರಶ್ನಿಸಲಾಗದು.  

ಈ ಪುರಸ್ಕಾರಕ್ಕೆ ಭೂಮಿಜಾ ಟ್ರಸ್ಟ್ ನೆರವು ನೀಡುತ್ತಿದೆ. ಇದು ಪ್ರದರ್ಶನಕಲೆಗಳ ಕಾರ್ಯಕ್ರಮಗಳನ್ನು ಬೆಂಗಳೂರು ಸೇರಿದಂತೆ ವಿಶ್ವಾದ್ಯಂತ ಹಮ್ಮಿಕೊಳ್ಳುವ ಸಂಸ್ಥೆ.

ಟಿ.ಎಫ್.ಎ. ಸಂಸ್ಥೆಯು ಆಂಗಿರಸ ‘ಟೊಟೊ’ ವೆಲ್ಲಾನಿಯ ಸ್ಮರಣಾರ್ಥ  2004 ರಲ್ಲಿ   ಸ್ಥಾಪಿತವಾಯಿತು. ಕಲೆಗಳ ಬಗ್ಗೆ ಗಾಢವಾದ ಆಸಕ್ತಿಯನ್ನಿರಿಸಿಕೊಂಡಿದ್ದ ತರುಣ ಟೊಟೊರವರ ಅಕಾಲಿಕ ಮರಣವು ಅವರ ಕುಟುಂಬ ಮತ್ತು ಸ್ನೇಹಿತರನ್ನು ಈ ಸಂಸ್ಥೆಯ ಸ್ಥಾಪನೆಗೆ ಪ್ರೇರೇಪಿಸಿತು. ಈ ಮೂಲಕ ಯುವ ಪ್ರತಿಭೆಗಳು ತಮ್ಮ ಕಲಾತ್ಮಕ 

ಅಭಿವ್ಯಕ್ತಿಯನ್ನು ಕಂಡುಕೊಳ್ಳುವಲ್ಲಿ ಉತ್ತೇಜನ ಸಿಗಲೆಂಬುದು ಇದರ ಆಶಯವಾಗಿದೆ.

No comments: